ಹುಬ್ಬಳ್ಳಿ: ಭಗವಾನ್ ಬುದ್ಧ ಹಾಗೂ ಡಾ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಮೇ 17ರಂದು ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದಿ. ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಕರ್ನಾಟಕ ಹಾಗೂ ಎಸ್-4 ಸೋಷಿಯಲ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಮಹದೇವ ಸ್ವಾಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9ಕ್ಕೆ ಧ್ವಜಾರೋಹಣ, 9.30ಕ್ಕೆ ಬುದ್ಧ ಹಾಗೂ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಂಜೆ 4.30ಕ್ಕೆ ಸವಾಯಿ ಗಂಧರ್ವ ಸಭಾಂಗಣದಲ್ಲಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಗುವುದು. ನಂತರ ನೃತ್ಯ ಸ್ಪರ್ಧೆ, ದೇಹದಾರ್ಢ್ಯ ಸ್ಪರ್ಧೆ ಮತ್ತು ಪ್ರಶಸ್ತಿ ಪುರಸ್ಕಾರ ಸಮಾರಂಭ ಜರುಗಲಿದೆ. ಸ್ಪರ್ಧೆಯಲ್ಲಿ 300 ಮಂದಿ ಭಾಗವಹಿಸಲಿದ್ದಾರೆ. ದೇಹದಾರ್ಢ್ಯ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ಉತ್ತಮ ಕಾರ್ಯಕರ್ತರನ್ನು ಆಯ್ಕೆ ಮಾಡಿ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು ಪದಕ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಎಸ್. ತಾವಡೆ, ಮೋಹನ ಹಿರೇಮನಿ, ಸಾಂಬಾ ಬಿಜವಾಡ, ಮಧುರೈ ಮುತ್ತು, ಜೆ.ಸಿ. ಕಮಲದಿನ್ನಿ ಮೊದಲಾದವರು ಹಾಜರಿದ್ದರು.

No comments:
Post a Comment