ಡಿಸೆಂಬರ್-07-2011
ಹಾಸನ, ಡಿ.6: ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್‌ರ 57ನೆ ಪರಿನಿಬ್ಬಾಣ ದಿನವನ್ನು ಜಿಲ್ಲೆಯ ವಿವಿಧೆಡೆ ಆಚರಿಸಿ ಮಹಾನ್ ಮಾನವತಾ ವಾದಿಯನ್ನು ಸ್ಮರಿಸಲಾಯಿತು.
ಹಾಸನ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಅಧಿಕಾರಿಗಳು ಮತ್ತು ಜನಪ್ರತಿ ನಿಧಿಗಳು, ಆನಂತರ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಮಾಲೆ ಹಾಕಿದರು.
ಶಾಸಕ ಎಚ್.ಕೆ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾಧಿಕಾರಿ ಕೆ.ಜಿ.ಜಗದೀ ಶ್, ಜಿ.ಪಂ. ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ.ಕೆ.ದ್ಯಾವಯ್ಯ, ನಗರಸಭೆಯ ಅಧ್ಯಕ್ಷ ಸಿ.ಆರ್.ಶಂಕರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬಿಎಸ್‌ಪಿ ಕಾರ್ಯಕರ್ತರು, ದಲಿತ ಸಂಘಟನೆಗಳ ಮುಖಂಡರು ಹಾಗೂ ಇನ್ನಿತರರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಕೆ.ಕುಮಾರಸ್ವಾಮಿ, ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್‌ರ ಆದರ್ಶ ಮತ್ತು ತತ್ವಗಳನ್ನು ಪ್ರತಿಯೊ ಬ್ಬರು ಪಾಲಿಸಬೇಕಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಮಾತನಾಡಿ, ಅಂಬೇಡ್ಕರ್‌ರ ಹುಟ್ಟುಹಬ್ಬ ಮತ್ತು ಪುಣ್ಯತಿಥಿಯಂದು ಅವರನ್ನು ಸ್ಮರಿಸಿಕೊಂಡರೆ ಸಾಲದು. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ಮುನ್ನಡೆಯಬೇಕಿದೆ ಎಂದರು.
ಅಂಬೇಡ್ಕರ್‌ರ ಪರಿನಿಬ್ಬಾಣ ದಿನದ ಅಂಗವಾಗಿ ಚಿನ್ನ-ಬೆಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ಪ್ರಮೋದ್ ಮತ್ತು ಛಲವಾದಿ ಮಹಾಸಭಾದ ಕಾರ್ಯಕರ್ತರು ಹಾಸ್ಟೆಲ್ ವಿದ್ಯಾರ್ಥಿ ಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಆರ್.ನಾರಾಯಣ್, ಕಾರ್ಯದ ರ್ಶಿ ನಿಂಗರಾಜು, ನಾಗೇಂದ್ರ, ಎಚ್.ಟಿ. ಲಕ್ಷ್ಮಣ್, ನಿಟ್ಟೂರುಸ್ವಾಮಿ ಮತ್ತಿತರರು ಹಾಜರಿದ್ದರು.
No comments:
Post a Comment