ಶನಿವಾರ - ಏಪ್ರಿಲ್ -23-2011
ಮಂಡ್ಯ, ಎ.22: ಮದ್ದೂರು ತಾಲೂಕು ಬುಜವಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ಬಿ.ಶ್ರೀನಿವಾಸ್, ಜಿಲ್ಲಾ ಸಂಘಟನಾ ಸಂಚಾಲಕರಾದ ಎಂ.ವಿ.ಕೃಷ್ಣ, ಎಂ.ಟಿ.ತಿಮ್ಮಯ್ಯ, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರಗಿಸಲು ಆಗ್ರಹಿಸಿದ್ದಾರೆ.ಹಲ್ಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರಗಿಸಿ ಅವರ ಆಸ್ತಿ-ಪಾಸ್ತಿಯನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಲ್ಲೆಗೊಳದಾಗ ಕುಟುಂಬಕ್ಕೆ ತಲಾ 50 ಸಾವಿರ ರೂ.ಪರಿಹಾರ, ದಲಿತರಿಗೆ ರಕ್ಷಣೆ ನೀಡಬೇಕು. ತಪ್ಪಿದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಗ್ರಾಮದಲ್ಲಿ ಸುಮಾರು 40 ವರ್ಷದಿಂದ ವಾಸಿಸುತ್ತಿರುವ ಪರಿಶಿಷ್ಟ ಜನಾಂಗದ ಕುಟುಂಬಗಳನ್ನು ಒಕ್ಕಲೆಬ್ಬಿಸಲು ಈ ರೀತಿಯ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿರುವ ಅವರು, ಪರಿಶಿಷ್ಟರನ್ನು ಒಕ್ಕಲೆಬ್ಬಿಸದೆ ಸದರಿ ಜಾಗವನ್ನು ಖಾಯಂಗೊಳಿಸಿ ಹಕ್ಕುಪತ್ರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾಪ್ರಭುತ್ವದ ಮೇಲಿನ ಹಲ್ಲೆ
ಜಿಲ್ಲಾ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ಎಸ್.ಪುಟ್ಟಂಕಯ್ಯ ಹೇಳಿಕೆ ನೀಡಿದ್ದು, ಕೃತ್ಯವನ್ನು ಖಂಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಹಲ್ಲೆಯಾಗಿದೆ. 21ನೆ ಶತಮಾನದಲ್ಲೂ ಇಂತಹ ಹೀನ ಕೃತ್ಯ ನಡೆಯುತ್ತಿರುವುದಕ್ಕೆ ಅವರು ವಿಷಾದಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
No comments:
Post a Comment